ಮಮತಾ ಬ್ಯಾನರ್ಜಿ ಆಹ್ವಾನಿಸಿದ್ದ ಒಂದು ಕಾರ್ಯಕ್ರಮಕ್ಕೆ ಅಮಿತಾಭ್ ಆಗಮಿಸಬೇಕಾಗಿತ್ತು ಆದರೆ ಅಮಿತಾಭ್ ಅನಾರೋಗ್ಯದ ಕಾರಣ ವೈದ್ಯರ ಸಲಹೆ ಮೇರೆಗೆ ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಎಂದಿದ್ದಾರೆ. ಇನ್ನು ಈ ವಿಚಾರವಾಗಿ ಜಯಾ ಬಚ್ಚನ್ ಅವರನ್ನು ಮಮತಾ ಬ್ಯಾನರ್ಜಿ ಸಂಪರ್ಕ ಮಾಡಿದ್ದು, ಅನಾರೋಗ್ಯದ ನಿಮಿತ್ತ ಅವರು ಗೈರಾಗುತ್ತಿರುವುದಾಗಿ ಜಯಾ ಬಚ್ಚನ್ ತಿಳಿಸಿದ್ದಾರೆ.
ಅಮಿತಾಭ್ ಬಚ್ಚನ್ ಇತ್ತೀಚೆಗಷ್ಟೆ ಅನಾರೋಗ್ಯ ಕಾರಣ ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಅವರ ಆರೋಗ್ಯ ಸುಧಾರಣೆಯಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಬಿಗ್ ಬಿ ಆರೋಗ್ಯದಲ್ಲಿ ಏರುಪೇರಾಗಿದೆ ಹಾಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ .