ಯಾವುದೇ ಕಾರಣಕ್ಕೂ ಅಧಿಕಾರಿಗಳ ವರ್ಗಾವಣೆ, ಇಲಾಖೆಗಳ ಕಾಮಗಾರಿ, ಗುತ್ತಿಗೆ ನೀಡುವುದು ಸೇರಿದಂತೆ ಯಾವುದೇ ವಿಷಯದಲ್ಲೂ ಕುಟುಂಬದ ಸದಸ್ಯರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು. ಇದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ ಎಂಬ ಸಂದೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರವಾನಿಸಿದ್ದಾರೆ.ಕುಟುಂಬ ಸದಸ್ಯರು ಅನಗತ್ಯವಾಗಿ ಮಧ್ಯಪ್ರವೇಶ ಮಾಡುವುದರಿಂದ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ಅಲ್ಲದೆ ಅನಗತ್ಯವಾಗಿ ಅಧಿಕಾರಿಗಳ ಮೇಲೆ ಪ್ರಭಾವ ಬೀರುವುದರಿಂದ ಇಲಾಖೆಯಲ್ಲಿ ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ನಿಮ್ಮ ಮಕ್ಕಳೇ ಇರಲಿ ಅಥವಾ ಇನ್ಯಾರೇ ಇರಲಿ ಹತ್ತಿರಕ್ಕೂ ಸೇರಿಸಬಾರದು ಎಂದು ಖುದ್ದು ಅಮಿತ್ ಷಾ ಸಲಹೆ ಮಾಡಿದ್ದಾರೆ.