ಅಮಿತ್ ಶಾ ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ: ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಕೆ
ನವದೆಹಲಿ:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ನಿಯೋಗ ಭೇಟಿ ಮಾಡಿದೆ. ಭೇಟಿ ವೇಳೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಕೆ ಮಾಡಿದ್ದಾರೆ.
ಅಮಿತ್ ಶಾ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ರಾಜ್ಯ ಬಿಜೆಪಿ ನಿಯೋಗ ಅಮಿತ್ ಶಾ ಭೇಟಿ ಮಾಡಿದ್ದು, ಹಿಂದೂ ವಿರೋಧಿ ಸರ್ಕಾರದ ಬಗ್ಗೆ ಅವರ ಗಮನಕ್ಕೆ ತರಲಾಗಿದೆ. ಧರ್ಮಸ್ಥಳ , ಕೊಪ್ಪಳದ ಗವಿಸಿದ್ದಪ್ಪ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಚರ್ಚಿಸಿದ್ದೇವೆ. ಹಾಗೇ ಹಿಂದೂಗಳ ಮೇಲೆ ಹಲ್ಲೆ ಕುರಿತು ಗಮನಕ್ಕೆ ತರಲಾಗಿದೆ ಎಂದು ಹೇಳಿದರು..
ಕೇಸ್ ವಾಪಸ್ ಪಡೆಯುತ್ತಿರುವ ಬಗ್ಗೆಯೂ ಚರ್ಚಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸ್ತಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದ್ದೆ. ಪೊಲೀಸರಿಗೆ ಅಧಿಕಾರ ನೀಡದ ಬಗ್ಗೆ ಗಮನಕ್ಕೆ ತಂದಿದ್ದೇವೆ. ಇನ್ನು ಕರ್ನಾಟಕದಲ್ಲಿ ವಿಪಕ್ಷವಾಗಿ ನಮ್ಮ ಕರ್ತವ್ಯ ಮಾಡಿದ್ದು, ಅದರ ಸಂಪೂರ್ಣ ವರದಿಯನ್ನು ಅಮಿತ್ ಶಾ ಅವರಿಗೆ ಸಲ್ಲಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.