ಟೆಕ್ ದೈತ್ಯ ಅಮೆಜಾನ್(Amazon) ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಾಫ್ಟ್ವೇರ್ ಸಪೋರ್ಟ್ ಎಂಜಿನಿಯರ್(Software Support Engineer) ಹುದ್ದೆ ಖಾಲಿ ಇದ್ದು, ಅಮೆಜಾನ್‌ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಹಾಕಬಹುದು ಎಂದು ತನ್ನ ಅಧಿಕೃತ ವೆಬ್ಸೈಟ್(Website)ನಲ್ಲಿ ತಿಳಿಸಿದೆ.

ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅಮೆಜಾನ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2021
ವಿದ್ಯಾರ್ಹತೆ:
ಸಾಫ್ಟ್ವೇರ್ ಸಪೋರ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ಅನುಭವ:
ಸಾಫ್ಟ್ವೇರ್ ಸಪೋರ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು. ಫ್ರೆಶರ್ಸ್ ಕೂಡ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ:
ಸಾಫ್ಟ್ವೇರ್ ಸಪೋರ್ಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಸಾಫ್ಟ್ವೇರ್ ಸಪೋರ್ಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 45,000 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಬಳಿಕ ಅಮೆಜಾನ್ ಮೆರಿಟ್ ಲಿಸ್ಟ್ ಪ್ರಕಟ ಮಾಡುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಆನ್ಲೈನ್ ಮೂಲಕ ಸಾಫ್ಟ್ವೇರ್ ಸಪೋರ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು.






