ಅಮೆಜಾನ್‌ನಲ್ಲಿ ಉದ್ಯೋಗಾವಕಾಶ: ವೇತನ 45000!

1
71

ಟೆಕ್​ ದೈತ್ಯ ಅಮೆಜಾನ್(Amazon)​ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಾಫ್ಟ್​​ವೇರ್ ಸಪೋರ್ಟ್​ ಎಂಜಿನಿಯರ್(Software Support Engineer) ಹುದ್ದೆ ಖಾಲಿ ಇದ್ದು, ಅಮೆಜಾನ್​ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಹಾಕಬಹುದು ಎಂದು ತನ್ನ ಅಧಿಕೃತ ವೆಬ್​ಸೈಟ್(Website)​​ನಲ್ಲಿ ತಿಳಿಸಿದೆ. 

ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅಮೆಜಾನ್​ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2021

 

ವಿದ್ಯಾರ್ಹತೆ:
ಸಾಫ್ಟ್​​ವೇರ್ ಸಪೋರ್ಟ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ಅನುಭವ:
ಸಾಫ್ಟ್​​ವೇರ್ ಸಪೋರ್ಟ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು. ಫ್ರೆಶರ್ಸ್​ ಕೂಡ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ:
ಸಾಫ್ಟ್​​ವೇರ್ ಸಪೋರ್ಟ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಸಾಫ್ಟ್​​ವೇರ್ ಸಪೋರ್ಟ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 45,000 ವೇತನ ನೀಡಲಾಗುತ್ತದೆ.

 

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಬಳಿಕ ಅಮೆಜಾನ್ ಮೆರಿಟ್​ ಲಿಸ್ಟ್​​ ಪ್ರಕಟ ಮಾಡುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಆನ್​ಲೈನ್​ ಮೂಲಕ ಸಾಫ್ಟ್​​ವೇರ್ ಸಪೋರ್ಟ್​ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

1 COMMENT

LEAVE A REPLY

Please enter your comment!
Please enter your name here