ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಸಕಲ ಸಿದ್ಧತೆಗಳೊಂದಿಗೆ ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ಹೆಚ್ಡಿಡಿ ಇಂದು ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಸೊಸೆ ಅನಿತಾ ಕುಮಾರಸ್ವಾಮಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಕುಟುಂಬ ಸಮೇತರಾಗಿ ಹೆಚ್ಡಿಡಿ ಪ್ರಯಾಣ ಮಾಡಲಿದ್ದು, ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಲಿದ್ದಾರೆ.
ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿಗಳ ಕುಟುಂಬ
Date: