ಅಯೋಧ್ಯೆ ತೀರ್ಪು ಪ್ರಕಟ : ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣ

Date:

ನವದೆಹಲಿ : ಸುಮಾರು 134 ವರ್ಷಗಳಿಂದ ರಾಜಕೀಯ ಮತ್ತು ಧಾರ್ಮಿಕ ವಿಚಾರವಾಗಿ ಬಹು ಸೂಕ್ಷ್ಮ ವಿವಾದವಾಗಿದ್ದ ಅಯೋಧ್ಯೆ ತೀರ್ಪು ಪ್ರಕಟವಾಗಿದೆ. ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್​​ ಎ ಬೊಬ್ಡೆ, ನ್ಯಾ ಡಿ ವೈ ಚಂದ್ರಚೂಡ್, ನ್ಯಾ ಅಶೋಕ್ ಭೂಷಣ್, ನ್ಯಾ. ಅಬ್ದುಲ್ ನಜೀರ್ ಅವರನ್ನು ಒಳಗೊಂಡಿದ್ದ ಪಂಚ ಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
ವಿವಾದಿತ 2.77 ಎಕರೆ ಜಾಗ ರಾಮ್​ಲಲ್ಲಾಗೆ ಸೇರಿದ್ದು ಎಂದಿರುವ ಸುಪ್ರೀಂ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಿ ಎಂದು ಪೀಠ ಆದೇಶಿಸಿದೆ. ಅಲ್ಲದೆ ಮಂದಿರ ನಿರ್ಮಾಣದ ಹೊಣೆಯನ್ನು ಸರ್ಕಾರಕ್ಕೆ ನೀಡಿರುವ ಕೋರ್ಟ್​ ನಿರ್ವಹಣೆ ಜವಬ್ದಾರಿಯನ್ನು ಟ್ರಸ್ಟ್​​ಗೆ ವಹಿಸಿದೆ. ಹಾಗೆಯೇ ಸುನ್ನಿವಕ್ಫ್ ಬೋರ್ಡ್​ಗೆ ಅಯೋಧ್ಯೆಯಲ್ಲೇ ಪ್ರತ್ಯೇಕ 5 ಎಕರೆ ಜಾಗವನ್ನು ನೀಡಲು ಕೋರ್ಟ್ ಆದೇಶಿಸಿದೆ,
2019 ಆಗಸ್ಟ್​ 6ರಿಂದ ಸಿಜೆಐ ರಂಜನ್ ಗೊಗೊಯ್ ನೇತೃತ್ವದಲ್ಲಿ 40 ದಿನಗಳ ವಿಚಾರಣೆ ನಡೆಸಿದ ಪಂಚ ಸದಸ್ಯ ಪೀಠ ಅಕ್ಟೋಬರ್ 16ರಂದು ವಿಚಾರಣೆ ಮುಗಿಸಿ ಅಂತಿಮ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿತ್ತು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...