ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Date:

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಅಯೋಧ್ಯೆಯ ಭವ್ಯ ಶ್ರೀ ರಾಮ ಮಂದಿರದ ನಿರ್ಮಾಣಕಾರ್ಯ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಇಂದು ಪವಿತ್ರ ಕೇಸರಿ ಧ್ವಜ ಹಾರಿಸಿದರು.ಈ ದಿನ ಮಾರ್ಗಶಿರ ಶುಕ್ಲ ಪಂಚಮಿ ತಿಥಿಯಾಗಿದ್ದು, ಇದೇ ದಿನ ಶ್ರೀರಾಮ ಮತ್ತು ಸೀತೆಯರ ವಿವಾಹವಾಗಿತ್ತು. ಅಯೋಧ್ಯೆಯಲ್ಲಿ 48 ಗಂಟೆಗಳ ಕಾಲ ಅಖಂಡ ತಪಸ್ಸು ಕೈಗೊಂಡ ಸಿಖ್‌ ಗುರು ತೇಗಬಹದ್ದೂರರ ಬಲಿದಾನ ದಿನವೂ ಇವತ್ತೇ ಬಂದಿದೆ. ಹಾಗಾಗಿ ಇದೇ ದಿನ ಈ ಮಂಗಳಕಾರ್ಯವನ್ನು ಮಾಡಲಾಗಿದೆ.

ಅಯೋಧ್ಯೆಗೆ ಆಗಮಿಸುತ್ತಿದ್ದಂತೆ ರಾಮ ಜನ್ಮಭೂಮಿ ಸಂಕೀರ್ಣದಲ್ಲಿರುವ ಏಳು ದೇವಾಲಯಗಳಿಗೆ ಭೇಟಿ ನೀಡಿದ ಮೋದಿ ಮಾತಾ ಅನ್ನಪೂರ್ಣ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ರಾಮ ದರ್ಬಾರ್‌ನಲ್ಲಿ ರಾಮಲಲ್ಲಾಗೆ ಪೂಜೆ ನೆರವೇರಿಸಿದರು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಅವರೊಂದಿಗೆ ಹಾಜರಿದ್ದರು.
ಧ್ವಜಾರೋಹಣ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿ ಬೆನ್ ಪಟೇಲ್ ಮತ್ತು ಸ್ವಾಮಿ ಗೋವಿಂದ್ ದೇವ್ ಗಿರಿ ಉಪಸ್ಥಿತರಿದ್ದರು.

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...