ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿಯನ್ನು ಏಮ್ಸ್ ಆಸ್ಪತ್ರೆ ನೀಡಿದೆ.
ರಾಜ್ಯಸಭೆ ಸದಸ್ಯರಾಗಿರುವ ಅರುಣ್ ಜೇಟ್ಲಿ ತೀವ್ರ ಅನಾಯಾಸದಿಂದ ಬಳಲುತ್ತಿದ್ದರು ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ.
ಏಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಅರುಣ್ ಜೇಟ್ಲಿ ಅವರಿಗೆ ಹೃದ್ರೋಗ ತಜ್ಞರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ವರ್ಷ ಮೂತ್ರ ಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅರುಣ್ ಜೇಟ್ಲಿ, ತಮ್ಮ ಆರೋಗ್ಯ ಸರಿಯಿಲ್ಲದ ಕಾರಣ ಈ ಬಾರಿ ಮೋದಿ ಸಂಪುಟದಲ್ಲಿ ತಮ್ಮನ್ನು ಸೇರಿಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೇಟ್ಲಿ ಮನವಿ ಮಾಡಿದ್ದರು ಹೀಗಾಗಿ ಅವರನ್ನು ನರೇಂದ್ರ ಮೋದಿ ಅವರ 2.0 ಸಂಪುಟದಿಂದ ಕೈ ಬಿಡಲಾಗಿತ್ತು.
ಶುಕ್ರವಾರ ರಾತ್ರಿ ಏಮ್ಸ್ ಆಸ್ಪತ್ರೆಯಿಂದ ಬಂದ ಪ್ರಕಟಣೆಯ ಅನುಸಾರ ಅರುಣ್ ಜೇಟ್ಲಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಜೇಟ್ಲಿ ಅವರ ರಕ್ತದೊತ್ತಡ ಸಾಮಾನ್ಯವಾಗಿದೆ. ಅವರ ಆರೋಗ್ಯವನ್ನು ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ.