ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ತಡರಾತ್ರಿ ಗಂಭೀರ ಆಗಿದ್ದರಿಂದ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಾದ ಅಮಿತ್ ಷಾ, ಹರ್ಷವರ್ಧನ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿದ್ದರು.
ವೈದ್ಯರ ಮಾಹಿತಿ ಪ್ರಕಾರ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವಿಶೇಷ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ತಪಾಸಣೆ ಮತ್ತು ನಿಗಾವಹಿಸುತ್ತಿದ್ದಾರೆ.ಸದ್ಯ ಅವರು ತೀವ್ರ ಗಂಭೀರ ಘಟಕದಲ್ಲಿದ್ದಾರೆ.ಆಗಸ್ಟ್ 10ರ ನಂತರ ಆಸ್ಪತ್ರೆಯಿಂದ ಅವರ ಆರೋಗ್ಯದ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಸುಮಾರು 1 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಇದ್ದ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಬಳಿಕ 12 ಗಂಟೆಗೆ ಆಸ್ಪತ್ರೆಯಿಂದ ಹೋಗಿ. ಮತ್ತೆ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಗೆ ಮೋದಿ ಹಾಗೂ ಅಮಿತ್ ಶಾ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ .