No menu items!
11.1 C
Munich
Wednesday, April 29, 2026

ಅರ್ಧಕ್ಕೇ ನಿಂತ ಬಿಗ್ ಬಾಸ್!

Must read

ಕನ್ನಡ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೇ ನಿಂತಿದೆ..ಸ್ಪರ್ಧಿಗಳೆಲ್ಲಾ 100 ದಿನಕ್ಕೂ ಮುನ್ನವೇ ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಾರೆ.

ಈ ಬಗ್ಗೆ ಪರಮೇಶ್ವರ್ ಗುಂಡ್ಕಲ್ ಫೇಸ್ ಬುಕ್ ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ.

ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ.

ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ. ಎಂದು ಪರಂ ಬರೆದುಕೊಂಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article