ಅಲೆಮಾರಿ ಕುಟುಂಬಗಳಿಗೆ ಸಿಹಿಸುದ್ದಿ ಕೊಟ್ಟ ಬೊಮ್ಮಾಯಿ

0
24

“ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ತಲಾ 6 ಕೋಟಿ ರೂಪಾಯಿ ವೆಚ್ಚದಲ್ಲಿ 3 ಅಲೆಮಾರಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಈಗಾಗಲೇ 4 ಅಲೆಮಾರಿ ವಸತಿ ಶಾಲೆಗಳು ರಾಜ್ಯದಲ್ಲಿವೆ.‌ ಹೊಸದಾಗಿ 3 ಅಲೆಮಾರಿ ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ತಲಾ 6 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.

 

ಬರುವ ದಿನಗಳಲ್ಲಿ ಎಸ್.ಸಿ., ಎಸ್.ಟಿ ಹಾಗೂ ಹಿಂದುಳಿದ ವರ್ಗಗಳ ವಸತಿಶಾಲೆಗಳ ಗುಣಾತ್ಮಕ ಉನ್ನತೀಕರಣ ಮಾಡಲಾಗುವುದು. ಉನ್ನತ ಶಿಕ್ಷಣ, ಉದ್ಯೋಗ ಅವಕಾಶಗಳು, ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಸರ್ಕಾರ ಹಿಂದುಳಿದ ವರ್ಗಗಳ ವಸತಿ ಶಾಲೆಗಳನ್ನು ನಡೆಸುತ್ತಿದ್ದು, ಪ್ರತಿ ವರ್ಷ 625 ಕೋಟಿ ರೂ.ಗಳ ಶಿಷ್ಯವೇತನವನ್ನು ನೀಡುತ್ತಿದೆ ಎಂದು ಇದೇ ಸಂದರ್ಭಧಲ್ಲಿ ವಿವರಣೆ ಕೊಟ್ಟರು.

 

LEAVE A REPLY

Please enter your comment!
Please enter your name here