ಅವನ ಮೋಸಕ್ಕೆ ಅವಳು ಬಲಿಯಾಗಿ ಬಿಟ್ಟಳು- ಆಕೆ ಸಾಯುವ ಮುನ್ನ…

Date:

ಪ್ರೀತಿಸಿದ ಯುವಕ ಮೋಸ ಮಾಡಿದ ಎಂದು ಯುವತಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಹಲವು ವರ್ಷಗಳಿಂದ ಯುವಕ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಆದರೆ ಇದೀಗ ಆತನಿಗೆ ಮದುವೆಯಾಗಿದೆ ಎಂಬ ವಿಚಾರ ತಿಳಿದು ಯುವತಿ ಆತ್ಮಹತ್ಯೆ ಸೆಲ್ಫಿ ವೀಡಿಯೋ ಮಾಡುತ್ತಾ ಕಣ್ಣೀರು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ ನಗರದ ಭರತ್ ಕಾಲೋನಿಯ ನಿವಾಸಿ ಆಶಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ, ಅದೇ ಏರಿಯಾಗೆ ಆಗಾಗಾ ಬರುತ್ತಿದ್ದ ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಈರಣ್ಣ ಇಬ್ಬರು ಪರಸ್ಪರ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು.

ಯುವಕ ಹೇಳಿದಂತೆಲ್ಲ ಆಶಾ ಕೇಳುತ್ತಿದ್ದಳು, ಮುಂದಿನ ಜೀವನದ ಬಗ್ಗೆ ಅಪಾರವಾದ ಕನಸನ್ನು ಕಂಡಿದ್ದಳು. ಆದರೆ ಈರಣ್ಣ ಮೊದಲೇ ಬೇರೆ ಯುವತಿಯ ಜೊತೆ ಮದುವೆಯಾಗಿದ್ದ ಎನ್ನಲಾಗುತ್ತಿದೆ. ಈ ವಿಷಯ ತಿಳಿದ ಬಳಿಕ ಆಶಾ ಆಘಾತಕ್ಕೆ ಒಳಗಾಗಿದ್ದಾಳೆ.

ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದಾನೆ. ಮದುವೆಯಾಗಿದ್ದರು ಮದುವೆಯಾಗಿಲ್ಲ ಎಂದು ತನಗೆ ಮೋಸ ಮಾಡಿದ್ದಾನೆ. ನನಗಾದ ಮೋಸ ಬೇರೆ ಯಾರಿಗೂ ಆಗಬಾರದು, ನನಗೆ ಮೋಸ ಮಾಡಿದ್ದಾನೆ. ನನ್ನ ಸಾವಿಗೆ ಈರಣ್ಣನೇ ಕಾರಣ, ಈರಣ್ಣನಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ವೀಡಿಯೋದಲ್ಲಿ ದುಃಖವನ್ನು ಹೊರ ಹಾಕಿದ್ದಾಳೆ. ಸೆಲ್ಫಿ ವೀಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍ಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...