ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ಹಾಗೂ ಯುವತಿ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆ ಆಡಿಯೋವನ್ನು ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿ ತಂಡಕ್ಕೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದು, ಜಾಲತಾಣದಲ್ಲಿ ಆಡಿಯೋ ಹರಿಬಿಟ್ಟವರ ವಿರುದ್ಧ ಜನತಾಪ್ರತಿನಿಧಿ ಕಾಯ್ದೆ ಅನ್ವಯ ಪೊಲೀಸರಿಗೆ ದೂರು ನೀಡಲು ಸೂಚಿಸಿದ್ದಾರೆ.
ಅಲ್ಲದೆ, ಸಂಸದ ಪ್ರತಾಪಸಿಂಹ ಅವರು, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರಿಗೆ ದೂರು ನೀಡಿದ್ದು, ಮತದಾನಕ್ಕೆ ಕೆಲವೇ ಗಂಟೆಗಳು ಇರುವಾಗ ತಮ್ಮ ಚಾರಿತ್ರ್ಯಹರಣ ಮಾಡುವ ದುರುದ್ದೇಶದಿಂದ ಆಡಿಯೋ ಸಂಭಾಷಣೆ ಹರಿಬಿಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.