ಅಶ್ಲೀಲ ವಿಡಿಯೋ ಪ್ರಕರಣ: ದೇವರಾಜೇಗೌಡರಿಗೆ ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ !

0
80

ಹಾಸನ: ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣಅಶ್ಲೀಲ ವಿಡಿಯೋ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ಕಿದೆ. ಹೌದು ರೇವಣ್ಣಅಶ್ಲೀಲ ವಿಡಿಯೋದ ಪೆನ್ ಡ್ರೈವ್ ಅನ್ನು ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೆಗೌಡಗೆ ಬಿಟ್ಟು ಬೇರೆ ಯಾರಿಗೂ ನೀಡಿಲ್ಲ ಎಂದು ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹರಿದಾಡಿದ ಮಹಿಳೆಯರ ಅಶ್ಲೀಲ ವಿಡಿಯೋ ಉಳ್ಳ ಪೆನ್ಡ್ರೈವ್ ಅನ್ನು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಗೆ ಕಾರ್ತಿಕ್ ನೀಡಿದ್ದ. ನಂತರ ನನಗೆ ನೀಡಿದ್ದ ಎಂದು ದೇವರಾಜೇಗೌಡ ಹೇಳಿದ್ದರು. ಇದರ ಬೆನ್ನಲ್ಲೇ ಕಾರ್ತಿಕ್ ಆ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ನಾನು ರೇವಣ್ಣ ಹಾಗೂ ಪ್ರಜ್ವಲ್ ಜೊತೆ ಹದಿನೈದು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದೆ. ವರ್ಷದ ಹಿಂದೆ ನಾನು ಕೆಲಸ ಬಿಟ್ಟಿದ್ದೇನೆ. ನನ್ನ ಮೇಲೆ ಮಾಡಿದ ದೌರ್ಜನ್ಯ, ನಮ್ಮ ಜಮೀನು ಬರೆಸಿಕೊಂಡಿದ್ದು, ಹೆಂಡತಿ ಮೇಲೆ ಹಲ್ಲೆ ಮಾಡಿದ್ದ ವಿಚಾರವಾಗಿ ನಾನು ಅವರ ಮನೆಯಿಂದ ಹೊರಗೆ ಬಂದೆ.
ನಾನು ಅವರ ವಿರುದ್ಧ ಕೇಸ್ ದಾಖಲಿಸಿ ಹೋರಾಟ ಮಾಡುವ ತಯಾರಿಯಲ್ಲಿ ಇದ್ದೆ. ಆಗ ಅವರ ವಿರುದ್ಧ ಹೋರಾಟ ಮಾಡುತ್ತಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ಬಗ್ಗೆ ವಿಚಾರ ಗೊತ್ತಾಗಿ ಅವರ ಬಳಿ ಕಷ್ಟ ಹೇಳಿಕೊಂಡಿದ್ದೆ. ಆಗ, ಅನ್ಯಾಯಕ್ಕೆ ನ್ಯಾಯ ಒದಗಿಸಿ ಕೊಡುವ ಭರವಸೆ ನೀಡಿದ್ದರು. ಆದರೆ, ಅವರು ಕೇಸ್ ತಗೊಳ್ಳಲಿಲ್ಲ. ಹಾಗಾಗಿ ನಾನು ಬೇರೆ ಲಾಯರ್ ಮೂಲಕ ಕೇಸ್ ಹಾಕಿಸಿದೆ. ಆಗ ಮತ್ತೆ ನನ್ನನ್ನು ಕರೆಸಿ, ಕೋರ್ಟ್ ಹೋರಾಟ ಮಾಡಿದರೆ ನಿನಗೆ ನ್ಯಾಯ ಸಿಗಲ್ಲ. ಜನರಿಗೆ ಗೊತ್ತಾಗಬೇಕು ಎಂದರು.
ಎಲ್ಲಾ ಮಾದ್ಯಮಗಳ ಎದುರು ಹೇಳಿಕೆ ಕೊಡಿಸಿದರು. ಆಗ ಅವರೇ ನನ್ನ ಜೊತೆ ನಿಂತು ಅವರೇ ಹೇಳಿಕೆ ಕೊಟ್ಟಿದ್ದರು’ ಎಂದು ಕಾರ್ತಿಕ್ ಹೇಳಿದ್ದಾರೆ. ಇದೆಲ್ಲ ಆದ ಬಳಿಕ ಪ್ರಜ್ವಲ್ ರೇವಣ್ಣ ನನ್ನ ವಿರುದ್ಧ ಸ್ಟೇ ತಂದರು. ಯಾವುದೆ ವೀಡಿಯೋ ಬಿಡುಗಡೆ ಮಾಡದಂತೆ ಸ್ಟೇ ತಂದಿದ್ದರು. ಆಗ ಆ ತಡೆಯಾಜ್ಞೆ ಪ್ರತಿಯನ್ನು ತೆಗೆದುಕೊಂಡು ನಾನು ದೇವರಾಜೇಗೌಡ ಬಳಿ ಹೋದೆ. ಆಗ ಅವರು, ‘ನಿನ್ನ ಬಳಿ ಏನೊ ವೀಡಿಯೋ, ಫೋಟೊ ಇದೆಯಂತೆ, ಹಾಗಾಗಿ ತಡೆಯಾಜ್ಞೆ’ ತಂದಿದಾರೆ ಎಂದರು.
ನನ್ನ ಬಳಿ ಏನು ವೀಡಿಯೋ ಇದೆ? ಅದನ್ನು ಅವರಿಗೆ ಯಾರು ಹೇಳಿದರು ಎಂದು ದೇವರಾಜೇಗೌಡರನ್ನು ಪ್ರಶ್ನಿಸಿದೆ. ಅದಕ್ಕವರು, ನಿನ್ನ ಬಳಿ ಇರುವ ಫೋಟೊ ಹಾಗೂ ವೀಡಿಯೊ ನನಗೆ ಕೊಡು ಎಂದರು. ಯಾರಿಗೂ ತೋರಿಸಲ್ಲ, ಜಡ್ಜ್ ಮುಂದೆ ಪ್ರಸ್ತುತಪಡಿಸುತ್ತೇನೆ. ತಡೆಯಾಜ್ಞೆ ತೆರವು ಮಾಡಿಸಿಕೊಡುತ್ತೇನೆ ಎಂದಿದ್ದರು. ಅವರನ್ನು ನಂಬಿ ನನ್ನ ಬಳಿ ಇದ್ದ ಒಂದು ಕಾಪಿಯನ್ನು ಅವರಿಗೆ ಕೊಟ್ಟಿದ್ದೆ. ಅದನ್ನು ಅವರು ಸ್ವಾರ್ಥಕ್ಕೆ ಬಳಸಿಕೊಂಡರು. ನಾನು ಅದನ್ನು ಕೊಟ್ಟು ವಕಾಲತ್ ಪತ್ರಕ್ಕೆ ಸಹಿ ಮಾಡಿ ಬಂದಿದ್ದೆ ಎಂದು ಕಾರ್ತಿಕ್ ತಿಳಿಸಿದ್ದಾರೆ.