ಅಶ್ಲೀಲ ಸಿನಿಮಾಗಳ ನಿರ್ಮಾಣ ದಂಧೆಯಲ್ಲಿ ಶಿಲ್ಪಾ ಶೆಟ್ಟಿ ಪಾತ್ರವಿದ್ಯಾ?

Date:

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪದಡಿಯಲ್ಲಿ ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ ಆಗಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ಚಿತ್ರೀಕರಿಸಿ, ಅದನ್ನು ಆಪ್‌ಗಳ ಮೂಲಕ ಪಬ್ಲಿಶ್ ಮಾಡಲಾಗುತ್ತಿತ್ತು ಎಂಬ ಆರೋಪ ರಾಜ್ ಕುಂದ್ರಾ ವಿರುದ್ಧ ಕೇಳಿಬಂದಿದೆ.
45 ವರ್ಷ ವಯಸ್ಸಿನ ರಾಜ್ ಕುಂದ್ರಾ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಸದ್ಯಕ್ಕೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ ರಾಜ್ ಕುಂದ್ರಾ. ಹೀಗಿರುವಾಗಲೇ, ಪ್ರಕರಣದಲ್ಲಿ ರಾಜ್ ಕುಂದ್ರಾ ಪತ್ನಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಾತ್ರವೂ ಇದ್ಯಾ ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಮುಂಬೈ ಪೊಲೀಸರು ಪ್ರತಿಕ್ರಿಯೆ


ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಸಕ್ರಿಯ ಪಾತ್ರ ಈವರೆಗೂ ತನಿಖೆಯಲ್ಲಿ ಕಂಡುಬಂದಿಲ್ಲ. ನಾವಿನ್ನೂ ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ಥರು ಮುಂದೆ ಬಂದು ಮುಂಬೈ ಪೊಲೀಸರನ್ನು ಸಂಪರ್ಕಿಸಿ. ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಂಬೈನ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಮಿಲಿಂದ್ ಭಾರಂಬೆ ತಿಳಿಸಿದ್ದಾರೆ.
ಉದ್ಯಮಿ ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ ಮದುವೆಯಾಗಿದ್ದು 2009ರಲ್ಲಿ. ರಾಜ್ ಕುಂದ್ರಾಗಿದು ಎರಡನೇ ಮದುವೆ. ಶಿಲ್ಪಾ ಶೆಟ್ಟಿಯನ್ನು ಪ್ರೀತಿಸಿ ರಾಜ್ ಕುಂದ್ರಾ ವಿವಾಹವಾದರು. ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿಗೆ ವಿಯಾನ್ ರಾಜ್ ಕುಂದ್ರಾ, ಸಮಿಷಾ ಶೆಟ್ಟಿ ಕುಂದ್ರಾ ಎಂಬ ಇಬ್ಬರು ಮಕ್ಕಳಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...