ಅಹಮದಾಬಾದ್ ವಿಮಾನ ದುರಂತ: ಎರಡನೆ ಬ್ಲ್ಯಾಕ್ ಬಾಕ್ಸ್ ಪತ್ತೆ
ನವದೆಹಲಿ: ಗುಜುರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಬರೋಬ್ಬರಿ 265 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್ಗೆ ಹೊರಟಿದ್ದ ಬೋಯಿಂಗ್ ಡ್ರೀಮ್ಲೈನರ್ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಟೇಕ್ಆಫ್ ಆಗಿ ಕೆಲವೇ ಕೆಲವು ನಿಮಿಷಗಳಲ್ಲಿ ಬಿ.ಜೆ. ಮೆಡಿಕಲ್ ಕಾಲೇಜಿನ ಹಾಸ್ಟೆಲ್ಗೆ ಏರ್ ಇಂಡಿಯಾ ವಿಮಾನ ಡಿಕ್ಕಿ ಹೊಡೆದಿದೆ.
ಪರಿಣಾಮ ಕಟ್ಟಡ ಧ್ವಂಸವಾಗಿದೆ. ಇದ್ರಿಂದಾಗಿ ಹಾಸ್ಟೆಲ್ನ ಡೈನಿಂಗ್ ಹಾಲ್ನಲ್ಲಿ ಕುಳಿತು ಊಟ ಮಾಡ್ತಿದ್ದ ವಿದ್ಯಾರ್ಥಿಗಳ ಪೈಕಿ 24 ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಇದೀಗ ಏರ್ಇಂಡಿಯಾ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ಲಭ್ಯವಾಗಿದೆ. ಇದೀಗ ವಿಮಾನದಲ್ಲಿದ್ದ ಎರಡನೇ ಬ್ಲ್ಯಾಕ್ಬಾಕ್ಸ್ ಪತ್ತೆಯಾಗಿದೆ.
ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಭಾನುವಾರ ಪತ್ತೆಯಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ಮಾಹಿತಿ ನೀಡಿದ್ದಾರೆ. ಈ ಎರಡನೇ ಬ್ಲ್ಯಾಕ್ ಬಾಕ್ಸ್ನಿಂದ ಘಟನೆಯ ಪ್ರತಿ ಸೆಕೆಂಡ್ನಲ್ಲಿ ಏನಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಇದು ಕಾಕ್ಪಿಟ್ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ
. ಈ ಎರಡನೇ ಬ್ಲ್ಯಾಕ್ ಬಾಕ್ಸ್ನಿಂದ ಘಟನೆಯ ಪ್ರತಿ ಸೆಕೆಂಡ್ನಲ್ಲಿ ಏನಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಇದು ಕಾಕ್ಪಿಟ್ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.