ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಹೆಚ್.ಡಿಕೆ, ಬಿಜೆಪಿ ನಾಯಕರ ಅಹೋರಾತ್ರಿ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ. ಜಿಂದಾಲ್, ಬರ, ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ದ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರುವ ಅಹೋರಾತ್ರಿ ಧರಣಿ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.ಅಹೋರಾತ್ರಿ ಧರಣಿಯ ಕೊನೆಯ ದಿನವಾದ ಇಂದು ಬಿಜೆಪಿಯ ನಾಯಕರು ಸಿಎಂ ಗೃಹ ಕಚೇರಿ ಕೃಷ್ಣಾ ಮೇಲೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.