ಆಂಧ್ರದಲ್ಲಿ ಪುನೀತ್ ಪ್ರತಿಮೆಗಳಿಗೆ ಭಾರೀ ಬೇಡಿಕೆ

Date:

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ಮರಣ ವಾರ್ತೆಯನ್ನು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್ ನಿಧನದಿಂದ ಅವರ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ. ಅವರು ಮೃತಪಟ್ಟು ಒಂದೂವರೆ ತಿಂಗಳು ಕಳೆಯುತ್ತಾ ಬಂದರೂ ನೋವು ಎಂಬುದು ಕಿಂಚಿತ್ತೂ ಕಡಿಮೆ ಆಗುತ್ತಿಲ್ಲ.

ಪುನೀತ್​ಗೆ ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಬೇರೆ ರಾಜ್ಯಗಳಲ್ಲೂ ಪುನೀತ್​ಗೆ ನಮನ ಸಲ್ಲಿಸುವ ಕಾರ್ಯ ನಡೆದಿದೆ. ಕನ್ನಡ ಚಿತ್ರರಂಗ​ ಮಾತ್ರವಲ್ಲದೆ ಪರಭಾಷೆಯಲ್ಲಿರುವ ಅಭಿಮಾನಿಗಳು ಕೂಡ ಪುನೀತ್​ ಅವರನ್ನು ನೆನೆಯುತ್ತಿದ್ದಾರೆ. ಅವರ ಮೇಲಿನ ಅಭಿಮಾನವನ್ನು ನಾನಾ ರೀತಿಯಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಕೆಲವರು ಪುನೀತ್ ದಾರಿಯಲ್ಲಿ ಸಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಆಂಧ್ರ ಪ್ರದೇಶದಲ್ಲಿ ಪುನೀತ್​ ಅವರ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ, ಅಲ್ಲಿನ ಶಿಲ್ಪಿಗಳಿಗೆ ಸಾಕಷ್ಟು ಆರ್ಡರ್​ಗಳು ಬರುತ್ತಿವೆ.

ಪುನೀತ್ ರಾಜ್​ಕುಮಾರ್​ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ. ಎಲ್ಲಾ ಏರಿಯಾಗಳಲ್ಲಿ ಪುನೀತ್ ಪ್ರತಿಮೆ ಸ್ಥಾಪಿಸಲು ಆಸಕ್ತಿ ತೋರಿದ್ದಾರೆ. ಆಂಧ್ರ ಪ್ರದೇಶದಲ್ಲೂ ಈ ರೀತಿ ಮಾಡಲಾಗುತ್ತಿದೆ. ಇಲ್ಲಿನ ಗುಂಟೂರು ಜಿಲ್ಲೆಯ ತೆನಾಲಿ ಜಿಲ್ಲೆಯ ಶಿಲ್ಪಿ ಕಾಟೂರಿ ವೆಂಕಟೇಶ್ವರರಾವ್ ಅವರಿಗೆ ಪುನೀತ್​ ಪ್ರತಿಮೆ ನಿರ್ಮಾಣಕ್ಕೆ ಭಾರೀ ಆರ್ಡರ್​ಗಳು ಬರುತ್ತಿವೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...