ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಇದರಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
ಕಾರ್ತಿಕಮಾಸದ ‘ಏಕಾದಶಿ’ ಪ್ರಯುಕ್ತ ದೇವಾಲಯಕ್ಕೆ ಸಹಜವಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಭಕ್ತರ ಪ್ರಮಾಣವನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗದ ಕಾರಣ, ಈ ಘಟನೆ ಸಂಭವಿಸಿದೆ.
ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲೂ ಇಂಥ ಕಾಲ್ತುಳಿತ ಘಟನೆ ಸಂಭವಿಸಿದ್ದುದಾಗಿ ವರದಿ ಆಗಿತ್ತು. ಇದೀಗ ಮತ್ತೆ ಶ್ರೀಕಾಕುಳಂದಲ್ಲಿ ಇಂಥ ಘಟನೆ ಸಂಭವಿಸಿದ್ದು ಸಾರ್ವಜನಿಕರಲ್ಲೂ ಆತಂಕ ಉಂಟಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.






