ಆಗಸ್ಟ್ 15ರ ನಂತರ ಕೊರೊನಾ ರೂಲ್ಸ್ ಮತ್ತಷ್ಟು ಕಠಿಣ

0
41

ರಾಜ್ಯದಲ್ಲಿ ಆಗಸ್ಟ್ 15ರ ಬಳಿಕ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಸಚಿವ ಆರ್ ಅಶೋಕ್ ಸುಳಿವು ಕೊಟ್ಟಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜತೆ ಇಂದು ಸಭೆ ನಡೆಯಲಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳ ಎದುರು ಮಾತನಾಡಿರುವ ಸಚಿವರು, ಬಹುಶಃ ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ 9 ರಿಂದ 12ನೇ ತರಗತಿ ಶಾಲೆಗಳು ಇದೆ 23ರಂದು ಆರಂಭಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೊಮ್ಮಾಯಿ ಸೂಚಿಸಿದ್ದಾರೆ. ಈಗಾಗಲೇ ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ವಾತ್ಸಲ್ಯ ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯಲ್ಲಿ ಮಕ್ಕಳು ಎಲ್ಲಾ ರೀತಿಯ ಆರೋಗ್ಯ ತಪಾಸಣೆಗೆ ಒಳಗಾಗಬಹುದು. ಇದರಲ್ಲಿ ಮಕ್ಕಳ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಕೂಡ ಒಳಗೊಂಡಿದೆ.

 

ಯೋಜನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಂಬಂಧಿತ ಅಧಿಕಾರಿಗಳಿಗೆ ನಾವು ತರಬೇತಿ ನೀಡಿದ್ದೇವೆ ಮತ್ತು ಈ ವೈರಸ್‌ನಿಂದ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುತ್ತೇವೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೆ ಮಕ್ಕಳ ಐಸಿಯು ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿರುವುದಾಗಿ ಅಶೋಕ್ ಹೇಳಿದ್ದಾರೆ.

ಕೋವಿಡ್ 3ನೇ ಅಲೆ ನಿರ್ವಹಣೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಜ್ಞರು, ಉನ್ನತಾಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here