No menu items!
8 C
Munich
Saturday, May 2, 2026

ಆಗಸ್ಟ್ 22ರವರೆಗೂ ಕರ್ನಾಟಕದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ

Must read

ಆಗಸ್ಟ್ 22ರವರೆಗೂ ಕರ್ನಾಟಕದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ

 

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಮಳೆ ಕೊಂಚ ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅದೇ ರೀತಿ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article