‘ಕೌಶಲ್ಯ ಮಾಸ’ ಆಚರಣೆಯ ಅಂಗವಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮೈಸೂರು ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮೈಸೂರು ಹಾಗೂ ಜಿಲ್ಲಾ ಉದ್ಯೋಗ ವಿಮಯ ಕಛೇರಿ ಸಹಯೋಗದಲ್ಲಿ ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಮೈಸೂರು ಹಾಗೂ ಬೆಂಗಳೂರು ಮೂಲದ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಮಾರುಕಟ್ಟೆ, ಹಣಕಾಸು, ವಿಮೆ, ಕೈಗಾರಿಕೆಗಳು, ಬ್ಯಾಕಿಂಗ್ ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಹುದ್ದೆಗಳನ್ನು ಭರ್ತಿ ಮಾಡಲು 20 ರಿಂದ 25 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.

7 ನೇ ತರಗತಿಯಿಂದ ಎಸ್. ಎಸ್. ಎಲ್. ಸಿ., ಪಿಯುಸಿ, ಎಲ್ಲಾ ಪದವಿ, ಐಟಿಐ (ಮೆಕ್ಯಾನಿಕಲ್, ಫಿಟ್ಟರ್) ಹಾಗೂ ಡಿಪ್ಲೊಮಾ, ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಬಹುದು. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರದ ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮೇಳದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಸ್ಥಳ: ಆಗಸ್ಟ್ 30ರಂದು ಬೆಳಗ್ಗೆ 9 ರಿಂದ 4 ರವರೆಗೆ ದಸರಾ ವಸ್ತು ಪ್ರದರ್ಶನ ಆವರಣ ದೊಡ್ಡಕೆರೆ ಮೈದಾನ ಉದ್ಯೋಗ ಮೇಳ ನಡೆಯಲಿದೆ






