ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿದ್ದು, ಆಗುಂಬೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.
ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಕಳೆದ ಮೂರು ವರ್ಷಗಳ ಹಿಂದೆ ಕೂಡ ಆರನೇ ಸುತ್ತಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ ಈಗಾಗಲೇ ಕುಸಿದಿದ್ದು
ಇನ್ನಷ್ಟು ಘಾಟಿ ಕುಸಿಯುವ ಸಾಧ್ಯತೆ ಇದೆ.
ಘಾಟಿ ಕುಸಿದ ಪರಿಣಾಮ ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ಘಾಟಿಯಲ್ಲಿ ಗುಡ್ಡ ಕುಸಿದ ಹಿನ್ನೆಲೆ ತೆರವು ಕಾರ್ಯಚರಣೆ ಆರಂಭವಾಗಿದೆ.