ಆಘಾತಕಾರಿ ಘಟನೆ: ಭೂಕುಸಿತದಿಂದ ಓರ್ವ ಮಹಿಳೆ ಸಾವು.. ಸ್ಥಗಿತಗೊಂಡ ಅಮರನಾಥ ಯಾತ್ರೆ!

tnit editors
1 Min Read

ಆಘಾತಕಾರಿ ಘಟನೆ: ಭೂಕುಸಿತದಿಂದ ಓರ್ವ ಮಹಿಳೆ ಸಾವು.. ಸ್ಥಗಿತಗೊಂಡ ಅಮರನಾಥ ಯಾತ್ರೆ!

ಶ್ರೀನಗರ:- ಭೂಕುಸಿತದಿಂದ ಓರ್ವ ಮಹಿಳೆ ಸಾವನ್ನಪ್ಪಿದ ಪರಿಣಾಮ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಸಾವನ್ನಪ್ಪಿದ್ದಾಳೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ, ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.

Share This Article