ಆಟೋ ಪ್ರಯಾಣ ದರವೂ ದುಬಾರಿಯಾಗಲಿದೆ ಎಚ್ಚರ!

Date:

ರಾಜ್ಯ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ ಆಟೊ ರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆಯಿದ್ದು, ಮೂಲ ದರವನ್ನು ಪ್ರಸ್ತುತ 25ರಿಂದ 30 ರೂಗೆ ಶೀಘ್ರವೇ ಏರಿಸುವ ಸಾಧ್ಯತೆಯಿದೆ. ರಸ್ತೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರು ಇತ್ತೀಚೆಗೆ ಪ್ರಸ್ತಾವಿತ ದರ ಏರಿಕೆ ಕುರಿತು ಸಭೆ ನಡೆಸಿದ್ದು, ಆಟೊ ಪ್ರಯಾಣ ದರ ಹೆಚ್ಚಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು ಎಂಟು ವರ್ಷಗಳ ಹಿಂದೆ, ಅಂದರೆ 2013ರಲ್ಲಿ ಆಟೊ ಪ್ರಯಾಣ ದರವನ್ನು ಕೊನೆಯದಾಗಿ ಏರಿಸಲಾಗಿತ್ತು. ‘ಆಟೊ ಪ್ರಯಾಣ ದರ ಏರಿಕೆ ಮಾಡುವ ಕುರಿತು ಪ್ರಸ್ತಾಪ ಮಾಡಲಾಗಿದೆ ಹಾಗೂ ಈ ವಿಷಯದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಆಟೊ ರಿಕ್ಷಾ ಒಕ್ಕೂಟಗಳು ದರ ಏರಿಕೆಗೆ ವಿನಂತಿ ಮಾಡಿವೆ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

‘ಕಳೆದ ಕೆಲವು ವರ್ಷಗಳಲ್ಲಿ ಎಲ್‌ಪಿಜಿ ಬೆಲೆ ಏರಿಕೆಯಾಗಿದೆ. 2013ರಲ್ಲಿ ಒಂದು ಲೀಟರ್ ಆಟೋ ಎಲ್‌ಪಿಗೆ ಗ್ಯಾಸ್‌ಗೆ 28 ರೂ ಇತ್ತು. ಇದು ಈಗ ದುಪ್ಪಟ್ಟಾಗಿದೆ. ಅಂದರೆ ಈಗ 49.95ರೂಗೆ ಏರಿಕೆಯಾಗಿದೆ. ಆದ್ದರಿಂದ ಸರ್ಕಾರಕ್ಕೆ ಕನಿಷ್ಠ ದರವನ್ನು ಏರಿಕೆ ಮಾಡಲು ವಿನಂತಿ ಮಾಡಿದ್ದೇವೆ’ ಎಂದು ಆಟೋರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎನ್. ಶ್ರೀನಿವಾಸ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕನಿಷ್ಠ ಆಟೋ ದರ 25 ರೂ ಇದೆ. ಈ ದರವನ್ನು 30 ರೂಗೆ ಏರಿಕೆ ಮಾಡಬೇಕು, ಅಂದರೆ ಐದು ರೂಪಾಯಿ ಏರಿಸಬೇಕು ಎಂದು ಆಟೋ ಮಾಲೀಕರು ಹಾಗೂ ಚಾಲಕರ ಅಸೋಸಿಯೇಷನ್‌ಗಳು ಈಚೆಗೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಮತ್ತೆ ಗ್ಯಾಸ್ ದರ ಏರಿಕೆಯಾದ ಬೆನ್ನಲ್ಲೇ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಈಗಾಗದೇ ದರ ಏರಿಕೆ ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದೆ.

 

 

 

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...