ಆಟೋ ವಿರುದ್ಧ ಮುಂದುವರಿದ ಆರ್ಟಿಒ ಕಾರ್ಯಾಚರಣೆ: ದುಪ್ಪಟ್ಟು ದರ ವಸೂಲಿ ಮಾಡಿದ್ದ 233 ಆಟೋ ಸೀಜ್

Date:

ಆಟೋ ವಿರುದ್ಧ ಮುಂದುವರಿದ ಆರ್ಟಿಒ ಕಾರ್ಯಾಚರಣೆ: ದುಪ್ಪಟ್ಟು ದರ ವಸೂಲಿ ಮಾಡಿದ್ದ 233 ಆಟೋ ಸೀಜ್

ಬೆಂಗಳೂರು: ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಖುಷಿಯಲ್ಲಿದ್ದ ಆಟೋ ಚಾಲಕರಿಗೆ ಕರ್ನಾಟಕ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ನಿಯಮ ಉಲ್ಲಂಘಿಸಿದ 200ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ. ಕಳೆದ ಒಂದು ವಾರದಿಂದ ನಗರದ 11 ಆರ್ಟಿಓ ಕಚೇರಿ ವ್ಯಾಪ್ತಿಯಲ್ಲಿ 20 ತಂಡಗಳನ್ನ ರಚಿಸಿ ಸಾರಿಗೆ ಅಧಿಕಾರಿಗಳು ನಗರದಾದ್ಯಂತ ಕಾರ್ಯಚರಣೆ ಕೈಗೊಂಡಿದ್ದಾರೆ. ಈ ವೇಳೆ ಒಟ್ಟು 3,531 ಆಟೋಗಳನ್ನ ತಪಾಸಣೆ ನಡೆಸಿದ್ದು, ಅದರಲ್ಲಿ ಪರ್ಮೀಟ್, ದುಪ್ಪಟ್ಟು ದರ ವಸೂಲಿ ಇನ್ಶೂರೆನ್ಸ್, ಡಾಕ್ಯುಮೆಂಟ್ಗಳಿಲ್ಲದ 1,006 ವಾಹನಗಳ ವಿರುದ್ಧ ಕೇಸ್ ದಾಖಲಿಸಿ, 233 ಆಟೋಗಳನ್ನ ಸೀಜ್ ಮಾಡಿದ್ದಾರೆ. ಈ ಆಟೋಗಳ ಪೈಕಿ ಅತಿ ಹೆಚ್ಚು ಆಟೋಗಳು ಆ್ಯಪ್ ಆಧಾರಿತ ಸಂಚಾರ ಮಾಡುತ್ತಿದ್ದ ಆಟೋಗಳೇ. ನಗರವ್ಯಾಪಿ ಆ್ಯಪ್ ಆಧಾರಿತ ಆಟೋಗಳ ಮೇಲೆಯೇ ಅತಿ ಹೆಚ್ಚು ದೂರಗಳಿದ್ದು, ಅದರಂತೆ ಆಯಾ ವ್ಯಾಪ್ತಿಯಲ್ಲಿ ಹೆಚ್ಚುವರಿ ದರ ಪಡೆದು ಸಂಚಾರ ಮಾಡುತ್ತಿದ್ದ ಆ್ಯಪ್ ಆಧಾರಿತ ಆಟೋಗಳಿಗೂ ಆರ್ಟಿಓ ಶಾಕ್ ಕೊಟ್ಟಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...