ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ: ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು: ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇದ್ರೆ ಪಕ್ಷದ ಮೇಲೆ ಮಾತ್ರ ಪರಿಣಾಮ ಬೀರುತ್ತೆ. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಅದಲ್ಲದೆ ಕಾಂಗ್ರೆಸ್‍ನಲ್ಲಿ ಒಂದು ಕಡೆ ಟಗರು ಮತ್ತೊಂದು ಕಡೆ ಬಂಡೆ ಗುದ್ದಾಡ್ತಾ ಇದ್ರೆ ಜನರಿಗೆ ತೊಂದರೆ ಆಗುತ್ತೆ. ಬಿಜೆಪಿ ಪಕ್ಷದಲ್ಲಿನ ಆಂತರಿಕ ಕಲಹದ ಬಗ್ಗೆ ಇಂದು ಅಥವಾ ನಾಳೆ ಎಲ್ಲವೂ ಕೂಡ ಸರಿ ಹೋಗಲಿದೆ ಎಂದಿದ್ದಾರೆ.