ಆಡಿಯೋ ವೈರಲ್ ಬೆನ್ನಲ್ಲೇ ಶಾಸಕ ಬಿಆರ್ ಪಾಟೀಲ್‌ಗೆ ಸಿಎಂ ಬುಲಾವ್!
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಇಲಾಖೆಯ ವಿರುದ್ಧವೇ ಬಿಆರ್ ಪಾಟೀಲ್ ಆರೋಪ ಮಾಡಿದ್ದು. ಜಮೀರ್ ಅವರ ಆಪ್ತ ಕಾರ್ಯದರ್ಶಿ ಜೊತೆ ಮಾತನಾಡಿರುವ ಆಡಿಯೋ ಭಾರೀ ವೈರಲ್ ಆಗುತ್ತಿದ್ದು, ಜಮೀರ್ ಬುಡಕ್ಕೆ ಈಗ ಭ್ರಷ್ಟಾಚಾರ ಬಾಣ ಬಂದು ನಿಂತಿದೆ. ತಮ್ಮದೇ ಸರ್ಕಾರದ ವಿರುದ್ಧ ಈ ಆರೋಪ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.
ಇನ್ನೂ ಸಿಎಂ ಸಿದ್ದರಾಮಯ್ಯ ಬಿ.ಆರ್.ಪಾಟೀಲ್ಗೆ ಖುದ್ದು ಫೋನ್ ಮಾಡಿ ಜೂ.25ರ ಸಂಜೆ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ಸೂಚಿಸಿದ್ದಾರೆ. ಬಿ ಆರ್ ಪಾಟೀಲ್ ಅವರ ಹೇಳಿಕೆಯನ್ನು ಅಸ್ತ್ರವಾಗಿಸಿಕೋಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬಂದು ಕಾವೇರಿ ನಿವಾಸಲ್ಲೇ ಭೇಟಿ ಮಾಡುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾಗಿ ಮೂಲಗಳು ತಿಳಿಸಿವೆ.
ಲಂಚ ನೀಡಿದವರಿಗೆ ಮಾತ್ರ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರೊಂದಿಗಿನ ಕರೆ ವೇಳೆ ಶಾಸಕ ಬಿ.ಆರ್.ಪಾಟೀಲ್ ಅವರು ಅಸಮಾಧಾನ ತೋಡಿಕೊಂಡಿದ್ದರು.






