ಆತನಿಲ್ಲದೇ ಕೆಕೆಆರ್ ಕೆಟ್ಟ ತಂಡವಾಗಿದೆ : ಫ್ಯಾನ್ಸ್

Date:

ಕೊಲ್ಕತ್ತಾ ನೈಟ್ ರೈಡರ್ಸ್ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಸಾಲು ಸಾಲು ಕಳಪೆ ಪ್ರದರ್ಶನ ನೀಡುತ್ತಿರುವ ತಂಡ. ಟೂರ್ನಿಯಲ್ಲಿ ಇದುವರೆಗೂ 7 ಪಂದ್ಯಗಳನ್ನಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿರುವುದು ಕೇವಲ 2 ಪಂದ್ಯಗಳಲ್ಲಿ. ಇನ್ನುಳಿದ 5 ಪಂದ್ಯಗಳಲ್ಲಿ ಸೋಲುಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರತಿ ಪಂದ್ಯದಲ್ಲಿಯೂ ತನ್ನ ಕಳಪೆ ಪ್ರದರ್ಶನದಿಂದ ಭಾರಿ ಟೀಕೆಗೆ ಒಳಗಾಗುತ್ತಿದೆ. ಇತ್ತೀಚಿನ ಕೆಲ ಆವೃತ್ತಿಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರದರ್ಶನವನ್ನು ನೋಡಿದರೆ ಎರಡು ಐಪಿಎಲ್ ಟ್ರೋಫಿಗಳನ್ನು ಗೆದ್ದ ಇತಿಹಾಸವಿರುವ ತಂಡ ಪ್ರದರ್ಶನ ನೀಡುವ ರೀತಿಯಾ ಇದು? ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡುತ್ತದೆ.

 

 

ಇದೇ ಪ್ರಶ್ನೆ ಇದೀಗ ಕೆಕೆಆರ್ ಅಭಿಮಾನಿ ವಲಯದಲ್ಲಿ ಎದ್ದಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮ್ಯಾನೇಜ್‌ಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಪ್ರಸ್ತುತ ಟೂರ್ನಿಯಲ್ಲಿ ಲೀಗ್ ಹಂತದ 14 ಪಂದ್ಯಗಳಲ್ಲಿ ಈಗಾಗಲೇ ಅರ್ಧದಷ್ಟು ಅಂದರೆ 7 ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪೂರೈಸಿದೆ, ಇದರಲ್ಲಿ ಈಗಾಗಲೇ 5 ಪಂದ್ಯಗಳನ್ನು ಸೋತಿರುವ ತಂಡದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಂಡು ಬರುತ್ತಿಲ್ಲ, ಸತತವಾಗಿ ಸೋಲುತ್ತಿದ್ದರೂ ಸಹ ತಂಡದ ಆಟಗಾರರು ಸೋಲಿನ ಕುರಿತಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇತ್ತ ತಂಡ ಸೋಲುತ್ತಿದ್ದರೆ ಅತ್ತ ಆಟಗಾರರು ಅವರ ಪಾಡಿಗೆ ಅವರು ತಮ್ಮದೇ ಆದ ಸಂಭಾಷಣೆಗಳಲ್ಲಿ ತೊಡಗಿಕೊಂಡಿರುತ್ತಾರೆ, ಇಂತಹ ತಂಡವನ್ನು ನಿರ್ವಹಿಸುತ್ತಿರುವ ಕೆಟ್ಟ ಮ್ಯಾನೇಜ್‌ಮೆಂಟ್ ಬಗ್ಗೆ ಕ್ರಮ ತೆಗೆದುಕೊಳ್ಳಿ ಎಂದು ಕೊಲ್ಕತ್ತಾ ತಂಡದ ಮಾಲೀಕರಲ್ಲಿ ಅಭಿಮಾನಿಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ.

 

 

ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುತ್ತಿದ್ದ ಸಮಯದಲ್ಲಿ ಒಂದೆರಡು ಪಂದ್ಯಗಳಲ್ಲಿ ತಂಡ ಕಳಪೆ ಪ್ರದರ್ಶನ ನೀಡಿದರೆ ಸಾಕು ಮುಂದಿನ ಪಂದ್ಯಗಳಲ್ಲಿ ತಮ್ಮ ತಪ್ಪನ್ನು ತಿದ್ದಿಕೊಂಡು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಗೆಲುವಿನ ಹಾದಿಗೆ ಮರಳುತ್ತಿತ್ತು. ಆದರೆ ಇದೀಗ ಎಲ್ಲವೂ ಬದಲಾಗಿದೆ, 2014ರ ಆ ನಂತರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅತಿ ಕೆಟ್ಟ ತಂಡವಾಗಿ ಬದಲಾಗಿಬಿಟ್ಟಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 2012 ಮತ್ತು 2014ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗಳಲ್ಲಿ ಗೌತಮ್ ಗಂಭೀರ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟ್ರೋಫಿಗಳನ್ನು ಗೆದ್ದಿತ್ತು. ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಿಟ್ಟು ಹೊರಟ ನಂತರ ತಂಡ ಕಳಪೆಯಾಗಿದೆ ಎಂದು ಕೆಕೆಆರ್ ಅಭಿಮಾನಿಗಳು ಗೌತಮ್ ಗಂಭೀರ್ ಕೆಕೆಆರ್ ತಂಡದ ನಾಯಕನಾಗಿದ್ದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...