ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ. ಶಾಸಕರೆಲ್ಲರೂ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹೋರಾಟ ಮಾಡುವುದು, ಬಳಿಕ ರಾಜ್ಯಪಾಲರ ಭೇಟಿಯ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಮುಂದುವರೆದು ಮಾತನಾಡಿ, ಈ ಹಣವನ್ನು ತೆಲಂಗಾಣಕ್ಕೆ ಟ್ರಾನ್ಸ್‌ಫರ್ ಮಾಡಿ ಚುನಾವಣೆಗೆ ಬಳಸಿಕೊಂಡಿದ್ದಾರೆ. ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು. ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ ಎಂದು ತಿಳಿಸಿದರು. ಪರಿಷತ್‌ಗೆ ನಡೆಯುವ ಚುನಾವಣೆ ಕುರಿತು ಮಾತನಾಡಿ, ನಮ್ಮ ಮೂವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿದೆ. ಪಕ್ಷಕ್ಕೆ ದುಡಿಯುವವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ಹೇಳಿದರು.
ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ !
Date: