ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ ಸಿದ್ದರಾಮಯ್ಯ
ಮೈಸೂರು: ಆತ್ಮಹತ್ಯೆ ಬೇಡ, ಸರ್ಕಾರ ನಿಮ್ಮ ಜೊತೆಗಿದೆ ಕಂಪ್ಲೇಂಟ್ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಕರೆ ನೀಡಿದರು.
ಇನ್ನೂ ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.
ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು.ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.
ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.