ಚೆನ್ನೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಕೆ ಪೊನ್ಮುಡಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 1.75 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ಅವರ ಪತ್ನಿಯನ್ನು ದೋಷಿಗಳು ಎಂದು ಮದ್ರಾಸ್ ಹೈಕೋರ್ಟ್ ಎರಡು ದಿನಗಳ ಹಿಂದೆ ತೀರ್ಪು ನೀಡಿ ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ. ಈ ಆದೇಶದಿಂದ ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಶಿಕ್ಷೆಯ ಜೊತೆಗೆ ದಂಪತಿಗೆ ತಲಾ 50 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಸದ್ಯ ಪೊನ್ಮುಡಿಯ ಉನ್ನತ ಶಿಕ್ಷಣ ಖಾತೆಯನ್ನು ಅವರ ಸಹೋದ್ಯೋಗಿಗಳಿಗೆ ಹಸ್ತಾಂತರಿಸುವ ಸಾಧ್ಯತೆಗಳಿವೆ. ಕಾನೂನಿನಡಿಯಲ್ಲಿ, ಶಾಸಕಾಂಗ ವ್ಯವಸ್ಥೆಯ ಸದಸ್ಯರು ತಪ್ಪಿತಸ್ಥರಾದರೆ ಸಂಸತ್ತು ಅಥವಾ ವಿಧಾನಸಭೆಯಿಂದ ಅವರು ಅನರ್ಹರಾಗುತ್ತಾರೆ.
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ ಮರುದಿನವೇ ಪೊನ್ಮುಡಿಯವರಿಗೆ ಈ ಶಿಕ್ಷೆ ವಿಧಿಸಲಾಗಿದೆ. 1996ರಿಂದ 2001ರ ವರೆಗಿನ ಡಿಎಂಕೆ ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪೊನ್ಮುಡಿ ಪ್ರಕರಣವು ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷವನ್ನು ಹೆಚ್ಚಿಸಿತ್ತು.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಕೆ ಪೊನ್ಮುಡಿಗೆ 3 ವರ್ಷ ಜೈಲು
Date: