No menu items!
15.1 C
Munich
Wednesday, May 6, 2026

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ನ ಸಿಬಿಐ ತನಿಖೆ: ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್

Must read

ಬೆಂಗಳೂರು:ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಬುಧವಾರ ಹೈಕೋರ್ಟ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆ ನಡೆಯಿತು. ಸಿಜೆ ಪಿ.ಬಿ.ವರಾಲೆ, ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು.
ವಿಚಾರಣೆ ವೇಳೆ ಸರ್ಕಾರದ ಆದೇಶವನ್ನು ಎಜಿ ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್ ಗಮನಕ್ಕೆ ತಂದರು. ಈ ವೇಳೆ ಸಿಬಿಐ ಪರ ಪ್ರಸನ್ನ ಕುಮಾರ್ ಹಾಗೂ ಡಿ.ಕೆ.ಶಿವಕುಮಾರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಿದ್ದರು.
ಸಿಬಿಐಗೆ ಅನುಮತಿ ನೀಡಿರುವ ಅನುಮೋದನೆ ಹಿಂಪಡೆಯಲಾಗಿದೆ ಎಂದು ಮನು ಸಿಂಘ್ವಿ ಕೋರ್ಟ್ ಗಮನಕ್ಕೆ ತಂದರು. ಸರ್ಕಾರದ ಆದೇಶ ಪ್ರತಿಯನ್ನು ಓದಿದ ಹೈಕೋರ್ಟ್, ನೀವು ಈಗ ಹೊಸ ತೀರ್ಮಾನ ತೆಗೆದುಕೊಂಡು ಬಂದಿದ್ದೀರಿ. ಇದು ಕಾನೂನುಬದ್ಧವಾಗಿದ್ಯಾ ಎಂದು ಸಿಜೆ ಪ್ರಶ್ನಿಸಿದರು. ಈ ಹಿಂದೆ ರಾಜ್ಯ ಸರ್ಕಾರದ ಅನುಮತಿ ಇರಲಿಲ್ಲ. ರಾಜ್ಯ ಸರ್ಕಾರ ಕೆಲವೊಂದು ನಿಯಮ ಉಲ್ಲಂಘನೆ ಮಾಡಿದೆ ಎಂದು ಶಶಿಕಿರಣ್ ಶೆಟ್ಟಿ ಜೊತೆ ಬಂದಿದ್ದ ಕಪಿಲ್ ಸಿಬಲ್ ವಾದಿಸಿದರು.
ಒಂದು ಪಕ್ಷ ಅಧಿಕಾರ ಹೊಂದಿರಬಹುದು. ‘ಬಿ’ ಪಕ್ಷ ಅಧಿಕಾರಕ್ಕೆ ಬರಬಹುದು. ಈ ರೀತಿ ಪದೇ ಪದೆ ಆದರೆ, ಇದು ಆಡಳಿತಕ್ಕೆ ಅಡ್ಡಿ ಉಂಟು ಮಾಡುವುದಿಲ್ಲವೇ? ಪ್ರತಿ ಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದರೆ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿತು. ಸರ್ಕಾರ ಕಾನೂನುಬದ್ಧವಾಗಿ ಈ ಪ್ರಕರಣ ವಾಪಸ್ ಪಡೆದುಕೊಂಡಿದೆ ಎಂದು ಕಪಿಲ್ ಸಿಬಲ್ ವಾದ ಮಂಡಿಸಿದರು. ಆದರೆ ಸಿಬಿಐ ಪರ ವಕೀಲರು ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಆದೇಶ ಈ ಹಂತದಲ್ಲಿ ಅಸಮಂಜಸ ಎಂದು ಸಿಬಿಐ ಪರ ವಕೀಲರು ಹೇಳಿದರು.

- Advertisement -spot_img

More articles

- Advertisement -spot_img

Latest article