ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಂದ ಮತದಾನ

By
0 Min Read

ಮಂಡ್ಯ: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯು ಇಂದು ಭರದಿಂದ ಸಾಗುತ್ತಿದೆ. ಅಂತೆಯೇ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಂದ ಮತದಾನ ಮಾಡಲಾಯಿತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

Share This Article