ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ !

Date:

ಬೆಂಗಳೂರು: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದರು.
ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ವಿವರಿಸಿದರು.
ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಸ್ಮರಿಸಿದರು. ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಙದರು. ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...