ಆಪರೇಷನ್ ಕಮಲದಿಂದ ನಾವು ದೂರ ಇರುತ್ತೇವೆ ಎಂದ ಶ್ರೀರಾಮುಲು

Date:

ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಬಹುದಾದ ಆಪರೇಷನ್ ಕಮಲದಿಂದ ನಾವು ದೂರ ಇರುತ್ತೇವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಕೈ ಹಾಕದಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ನಾವು ಅದನ್ನು ಪಾಲಿಸುತ್ತೇವೆ. ಸರ್ಕಾರ ಪತನಗೊಳಿಸುವ ಯಾವ ಪ್ರಯತ್ನವನ್ನೂ ಬಿಜೆಪಿ ಮಾಡುತ್ತಿಲ್ಲ, ಮಾಡುವುದೂ ಇಲ್ಲ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರ ಒಡೆದ ಮನೆಯಂತಾಗಿದೆ. ಒಡೆದ ಮನೆ ವಾಸಕ್ಕೆ ಯೋಗ್ಯವಲ್ಲ. ಸಂಸಾರಕ್ಕೆ ಯೋಗ್ಯವಲ್ಲದ ಮನೆಯಲ್ಲಿ ಯಾರೂ ಇರುವುದಿಲ್ಲ. ಅದೇ ರೀತಿ ಈ ಸರ್ಕಾರ ಪತನಗೊಂಡರೆ ಸಾಕು ಎಂದು ದೋಸ್ತಿ ಪಕ್ಷಗಳ ಶಾಸಕರು, ಸಚಿವರೇ ಕುಣಿಯುತ್ತಿದ್ದಾರೆ.

ಆಡಳಿತದ ಕುಸಿತದಿಂದಾಗಿ ಅರಾಜಕತೆ ನಿರ್ಮಾಣವಾಗಿದೆ. ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದರು.ರಾಜ್ಯದ ಬರ ಪರಿಸ್ಥಿತಿ ಇದೆ. ಸಮ್ಮಿಶ್ರ ಸರ್ಕಾರ ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಜವಾಬ್ದಾರಿಯುತ ವಿರೋಧ ಪಕ್ಷವಾದ ಬಿಜೆಪಿ ರಾಜ್ಯಾದ್ಯಂತ ಬರ ಅಧ್ಯ

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...