ಯಡಿಯೂರಪ್ಪ ಅವರು ಇದೀಗ ಆಪರೇಷನ್ ಕಮಲಕ್ಕೆ ಮುಂದಾಗಿದ್ರು ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇತ್ಯರ್ಥವಾಗುವವರೆಗೂ ಅನ್ಯ ಪಕ್ಷಗಳ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ದೆಹಲಿಯಿಂದ ಬಂದಿದೆ.
ಹೀಗಾಗಿ ಸದ್ಯಕ್ಕೆ 2ನೇ ಹಂತದ ಆಪರೇಷನ್ ಕಮಲಕ್ಕೆ ವಿರಾಮ ಬಿದ್ದಿದ್ದು ಬಿಜೆಪಿ ಸೇರ್ಪಡೆಯಾಗಿ ಗೂಟದ ಕಾರು ಕನಸು ಕಂಡಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಈ ಬಾರಿ 2ನೇ ಹಂತದ ಆಪರೇಷನ್ ಕಮಲದಲ್ಲಿ ವಿಶೇಷವಾಗಿ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನೇ ಗುರಿಯಾಗಿಟ್ಟುಕೊಂಡು 20ಕ್ಕೂ ಹೆಚ್ಚು ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿತ್ತು.