ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಯಲ್ಲಿಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಚಿಕಿತ್ಸೆ
ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಅಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಇಂದು ಅನಾರೋಗ್ಯಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಾಮೀಜಿಗೆ ತಲೆನೋವು, ವಾಂತಿ ಮತ್ತು ಎದೆನೋವು ಕಾಣಿಸಿಕೊಂಡ ಕಾರಣದಿಂದ ಅವರನ್ನು ತಕ್ಷಣವೇ ಬಾಗಲಕೋಟೆ ನಗರದ ಕೆರೂಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗೆ ಪೀಠಕ್ಕೆ ಬೀಗ ಹಾಕಿದ ಘಟನೆ ಬಳಿಕ ಅವರು ಭಾವುಕವಾಗಿ ನೊಂದಿದ್ದ ವಿಷಯ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದೇ ಹಿನ್ನೆಲೆಯಲ್ಲಿ ಅವರ ಆರೋಗ್ಯ ಸ್ಥಿತಿ ಏರುಪೇರಾಗಿರುವ ಶಂಕೆ ವ್ಯಕ್ತವಾಗಿದೆ.