ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ನಾಯಕ, ಸಚಿವ ಡಿ.ಕೆ.ಶಿವಕುಮಾರ್ ಅಸ್ವಸ್ಥರಾಗಿ ಪ್ರಚಾರವನ್ನು ಅಲ್ಲಿಗೆ ನಿಲ್ಲಿಸಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕುಂದಗೋಳದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸಿದ್ದಾರೆ. ಕ್ಷೇತ್ರದಲ್ಲಿ ಎದ್ದಿದ್ದ ಬಂಡಾಯ ಶಮನದ ಜೊತೆ ಕುಸುಮಾವತಿ ಶಿವಳ್ಳಿ ಗೆಲುವಿಗಾಗಿ ನಿರಂತರ ಓಡಾಟ ನಡೆಸಿದ್ದಾರೆ. ಈ ನಡುವೆ ಕುಂದಗೋಳದಲ್ಲಿ ಪಕ್ಷದ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ ನಡೆಸಿದ್ದಾರೆ.
ಇದರಿಂದಾಗಿ ಚುನಾವಣಾ ಒತ್ತಡದಿಂದ ಅಸ್ವಸ್ಥಗೊಂಡಿದ್ದಾರೆ. ಹುಬ್ಬಳ್ಳಿಯ ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಡಿಕೆಶಿ, ಅಲ್ಲಿಯೇ ವೈದ್ಯರಿಂದ ಹೈ ಬಿಪಿ, ಶುಗರ್ಗೆ ಚಿಕಿತ್ಸೆ ಪಡೆದಿದ್ದಾರೆ.ಕೊಠಡಿಯಿಂದ ಹೊರಬಂದಿಲ್ಲ. ವೈದ್ಯರ ಸಲಹೆ ಮೇರೆಗೆ ಪ್ರಮುಖರನ್ನು ಮಾತ್ರ ಕೊಠಡಿಯೊಳಗೆ ಕರೆಸಿಕೊಂಡು ಚರ್ಚೆ ನಡೆಸುತ್ತಿದ್ದಾರೆ.