ಆರೋಪಿ ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ !

Date:

ಬೆಂಗಳೂರು: ಒಂದು ತಿಂಗಳಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ಕಡೆಗೂ ಅರೆಸ್ಟ್‌ ಆಗಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದಾಗ ಆರೋಪಿತ ಪ್ರಜ್ವಲ್ ನಮ್ಮ ದೇಶದಲ್ಲೇ ಇದ್ದಿದ್ದರೆ, ನಮ್ಮ ತಂಡವನ್ನು ಕಳುಹಿಸಬಹುದಿತ್ತು. ಆದರೆ, ಅವರು ವಿದೇಶದಲ್ಲಿದ್ದ ಕಾರಣ ಬಂಧನ ತಡವಾಯಿತು. ಈಗ ಎಸ್ಐಟಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಅಧಿಕಾರಗಳ ಜೊತೆ ಮುಂದಿನ ಕ್ರಮದ ಕುರಿತು ಚರ್ಚಿಸುತ್ತೇವೆ” ಎಂದರು.
”ಆರೋಪಿ ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಎಲ್ಲವೂ ಪ್ರೊಸೀಜರ್ ಪ್ರಕಾರವೇ ನಡೆಯುತ್ತದೆ. ಸಂತ್ರಸ್ತ ಮಹಿಳೆಯರಿಗೆ ಬಂದು ದೂರು ನೀಡಲು ಮನವಿ ಮಾಡಿದ್ದೇವೆ. ಕಾನೂನು ರೀತಿ ತನಿಖೆ ಮುಂದುವರೆಯಲಿದೆ” ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...