ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ದಿಢೀರ್ ಆಸ್ಪತ್ರೆಗೆ ದಾಖಲು!
ಜೋಧ್ ಪುರ:- ಅನಾರೋಗ್ಯದಿಂದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಜೋಧಪುರದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರಂಭದಲ್ಲಿ ಅವರ ರಕ್ತದೊತ್ತಡ ಹೆಚ್ಚಾಗಿತ್ತು ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ. ಅವರು ಅಪಾಯದಿಂದ ಪಾರಾಗಿದ್ದಾರೆ ಮತ್ತು ಅವರ ಸ್ಥಿತಿ ಈಗ ಉತ್ತಮವಾಗಿದೆ. ಅವರನ್ನು ಏಮ್ಸ್‌ನಲ್ಲಿ 24 ಗಂಟೆಗಳ ಕಾಲ ವೀಕ್ಷಣೆಯಲ್ಲಿ ಇರಿಸಲಾಗುತ್ತದೆ. ಈ ಸಮಯದಲ್ಲಿ, ಅವರನ್ನು ಸಂಪೂರ್ಣವಾಗಿ ಪರೀಕ್ಷಿಸಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನೂ ದತ್ತಾತ್ರೇಯ ಹೊಸಬಾಳೆ ಈಗ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಅಂಬೇಕರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನ ಜೋಧಪುರದಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಆರೋಗ್ಯ ಹದಗೆಟ್ಟಿತು. ಹೀಗಾಗಿ ಅವರನ್ನು ಜೋಧಪುರದ ಏಮ್ಸ್‌ಗೆ ದಾಖಲಿಸಲಾಯಿತು. ಆರಂಭದಲ್ಲಿ ಅವರ ರಕ್ತದೊತ್ತಡ ಹೆಚ್ಚಾಗಿತ್ತು ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ