ಆರ್ಯನ್ ಖಾನ್‌ಗೆ ಗಾಂಜಾ ಕೊಟ್ಟಿದ್ಲಾ ಈ ಹಾಟ್ ನಟಿ!

Date:

ಕ್ರೂಸ್​ ಶಿಪ್​ ಡ್ರಗ್ಸ್​ ಕೇಸಿನಲ್ಲಿ ಇದೀಗ ಮತ್ತೊಬ್ಬ ಬಾಲಿವುಡ್​ ನಟ ಚಂಕಿ ಪಾಂಡೆ ಪುತ್ರಿಯಾದ ನಟಿ ಅನನ್ಯ ಪಾಂಡೆಯನ್ನು ಎನ್​ಸಿಬಿ ವಿಚಾರಣೆ ನಡೆಸುತ್ತಿದೆ. ಈಕೆ ನ್ಯಾಯಾಂಗ ಬಂಧನದಲ್ಲಿರುವ ಶಾರುಖ್​ ಪುತ್ರ ಆರ್ಯನ್​ ಖಾನ್​ಗೆ ಗಾಂಜಾ ಒದಗಿಸಿಕೊಡುವುದಾಗಿ ಹೇಳಿದ್ದಳು ಎಂದು ವಾಟ್ಸಾಪ್​ ಸಂಭಾಷಣೆಯಲ್ಲಿ ಮಾಹಿತಿ ಲಭಿಸಿದೆ ಎನ್ನಲಾಗಿದೆ.

ಬಂಧಿತ ಆರ್ಯನ್​ ಖಾನ್​ನ ವಾಟ್ಸಾಪ್​ ಚ್ಯಾಟ್​ಗಳ ಆಧಾರದ ಮೇಲೆ ತನಿಖೆ ಮುಂದುವರೆಸಿರುವ ಎನ್​ಸಿಬಿ ಅಧಿಕಾರಿಗಳಿಗೆ, ಅನನ್ಯಾರೊಂದಿಗೆ ಆರ್ಯನ್​ ಡ್ರಗ್ಸ್​ ಪಡೆಯುವ ಬಗ್ಗೆ ಮಾತನಾಡಿರುವ ಮಾಹಿತಿ ಸಿಕ್ಕಿದೆ. ಒಂದು ಸಂಭಾಷಣೆಯಲ್ಲಿ ಆರ್ಯನ್​ ಗಾಂಜಾ ಪಡೆಯಲು ಏನಾದರೂ ‘ಜುಗಾಡ್​’ ಮಾಡಲು ಸಾಧ್ಯವಾ ಎಂದು ಕೇಳಿದ್ದಾನೆ. ಆಗ ಅನನ್ಯ, ‘ಅರೇಂಜ್​ ಮಾಡುತ್ತೇನೆ’ ಎಂದು ಹೇಳಿದ್ದಾಳೆ ಎಂದು ಎನ್​ಸಿಬಿ ಮೂಲಗಳು ತಿಳಿಸಿರುವುದಾಗಿ ಇಂಡಿಯ ಟುಡೇ ವರದಿ ಮಾಡಿದೆ.

ನಿನ್ನೆ ಮಧ್ಯಾಹ್ನ ಮತ್ತು ಇಂದು ಬೆಳಿಗ್ಗೆಯಿಂದ ಅನನ್ಯಾರ ವಿಚಾರಣೆ ನಡೆಸುತ್ತಿರುವ ಎನ್​ಸಿಬಿ ಅಧಿಕಾರಿಗಳು ಈ ಬಗ್ಗೆ ಆಕೆಯನ್ನು ಪ್ರಶ್ನಿಸುತ್ತಿದ್ದಾರೆ. ಅನನ್ಯ ಆರ್ಯನ್​ಗೆ ಡ್ರಗ್ಸ್​ ಒದಗಿಸಿದ್ದಕ್ಕೆ ಸದ್ಯಕ್ಕೆ ಮತ್ಯಾವುದೇ ಪುರಾವೆ ಇಲ್ಲದಿದ್ದರೂ, ಇನ್ನೂ ಕೆಲವು ಸಂಭಾಷಣೆಗಳಲ್ಲಿ ಇಬ್ಬರೂ ಡ್ರಗ್ಸ್​ ಬಗ್ಗೆ ಮಾತನಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಮತ್ತೊಂದೆಡೆ, ಆರ್ಯನ್​ ಖಾನ್​ ಜಾಮೀನು ಅರ್ಜಿ ತಿರಸ್ಕರಿದ್ದ ಎನ್​ಡಿಪಿಎಸ್​ ವಿಶೇಷ ನ್ಯಾಯಾಲಯ, ಅಕ್ಟೋಬರ್​ 30 ರವರೆಗೆ ಅವನನ್ನು ನ್ಯಾಯಾಂಗ ಬಂಧನದಲ್ಲಿರಿಸುವಂತೆ ಆದೇಶಿಸಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...