ಆರ್ಸಿಬಿಯ ಈ ಆಟಗಾರನ ವಿಕೆಟ್ ಪಡೆಯಬೇಕೆಂದ ಹರ್ಷಲ್ ಪಟೇಲ್

Date:

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಹರ್ಷಲ್ ಪಟೇಲ್ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿ 17 ವಿಕೆಟ್ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ. 2012ರಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗೆ ಪದಾರ್ಪಣೆ ಮಾಡಿದ ಹರ್ಷಲ್ ಪಟೇಲ್ ಐದು ವರ್ಷಗಳ ಕಾಲ ಬೆಂಗಳೂರು ತಂಡದ ಪರ ಆಟವಾಡಿದ್ದರು. ನಂತರ 2018ರಿಂದ 3 ವರ್ಷಗಳ ಕಾಲ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ ಹರ್ಷಲ್ ಪಟೇಲ್ ಪುನಃ 2021ರ ಐಪಿಎಲ್ ಮಿನಿ ಹರಾಜಿನಲ್ಲಿ ಬೆಂಗಳೂರು ತಂಡವನ್ನು ಸೇರಿಕೊಂಡರು.

 

 

ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ನಂತರ ಹರ್ಷಲ್ ಪಟೇಲ್ ಇದೀಗ ಪ್ರಸ್ತುತ ಐಪಿಎಲ್ ಟೂರ್ನಿ ಹಾಗೂ ತಮ್ಮ ಐಪಿಎಲ್ ಪಯಣದ ಕುರಿತು ಮಾತನಾಡಿದ್ದಾರೆ. ಇದುವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅತಿಹೆಚ್ಚು ಆವೃತ್ತಿಗಳಲ್ಲಿ ಆಡಿರುವ ಹರ್ಷಲ್ ಪಟೇಲ್ ಭವಿಷ್ಯದ ದಿನಗಳಲ್ಲಿ ಒಂದುವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆಡುವ ಪರಿಸ್ಥಿತಿ ಬಂದರೆ ಬೆಂಗಳೂರು ತಂಡದ ಆ ಒಬ್ಬ ಬ್ಯಾಟ್ಸ್‌ಮನ್‌ನ ವಿಕೆಟ್ ಪಡೆಯಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಈಗಾಗಲೇ ನನ್ನ ಕೆಲ ಕನಸಿನ ವಿಕೆಟ್‍ಗಳನ್ನು ಪಡೆದುಕೊಂಡಿದ್ದೇನೆ. 2012ರಲ್ಲಿ ಸಚಿನ್ ತೆಂಡೂಲ್ಕರ್ ವಿಕೆಟ್ ಪಡೆದಿದ್ದೆ ಹಾಗೂ ಈಗಾಗಲೇ ಎಂಎಸ್ ಧೋನಿಯ ವಿಕೆಟ್‌ನ್ನು 2 ಬಾರಿ ಮತ್ತು ವಿರಾಟ್ ಕೊಹ್ಲಿಯ ವಿಕೆಟ್‌ನ್ನು ಒಂದು ಬಾರಿ ಪಡೆದಿದ್ದೇನೆ. ಈ ಎಲ್ಲಾ ವಿಕೆಟ್‍ಗಳು ಕೂಡ ನನ್ನ ಕನಸಿನ ವಿಕೆಟ್‍ಗಳಾಗಿದ್ದವು. ಆದರೆ ಭವಿಷ್ಯದ ದಿನಗಳಲ್ಲಿ ಒಂದುವೇಳೆ ನಾನೇನಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆಡುವ ಪರಿಸ್ಥಿತಿ ಎದುರಾದರೆ ಎಬಿ ಡಿವಿಲಿಯರ್ಸ್ ವಿಕೆಟ್‌ನ್ನು ಪಡೆಯಲು ಇಷ್ಟಪಡುತ್ತೇನೆ’ ಎಂದು ಹರ್ಷಲ್ ಪಟೇಲ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...