ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ಅರೆಸ್ಟ್ ಆಗುತ್ತಿದ್ದಂತೆ ಕೋರ್ಟ್ ಮೆಟ್ಟಿಲೇರಿದ ಧರ್ಮಪತ್ನಿ!

Date:

ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ಅರೆಸ್ಟ್ ಆಗುತ್ತಿದ್ದಂತೆ ಕೋರ್ಟ್ ಮೆಟ್ಟಿಲೇರಿದ ಧರ್ಮಪತ್ನಿ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥನನ್ನು ಕಬ್ಬನ್ ಪಾರ್ಕ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿಖಿಲ್ ಸೋಸಲೆ ಬಂಧಿತ ಆರೋಪಿ.

ಪತಿ ನಿಖಿಲ್ ಸೋಸಲೆ ಅರೆಸ್ಟ್ ಆಗುತ್ತಿದ್ದಂತೆ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್​ ಗೆ ರಿಟ್​ ಅರ್ಜಿ ಸಲ್ಲಿಸಿದ್ದು, ಬಂಧನಕ್ಕೆ ತಡೆ ನೀಡುವಂತೆ ಅರ್ಜಿ ಮೂಲಕ ಹೈಕೋರ್ಟ್​ ಗೆ ಮನವಿ ಮಾಡಿದ್ದಾರೆ.

ಸಿಎಂ ಆದೇಶಾನುಸಾರ ತಮ್ಮ ಪತಿಯನ್ನ ಕಾನೂನುಬಾಹಿರವಾಗಿ ಬಂಧನ ಮಾಡಲಾಗಿದೆ ಎಂದು ನಿನ್ನೆಯ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಆಧಾರವಾಗಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧಿಸಲಾಗಿದ್ದು, ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ
ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆನ್‌ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶವಿತ್ತು. ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸರ್ಕಾರ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ನಂತರ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು. ಅವಘಡ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ ಯಾವುದೇ ಲೋಪವೆಸಗಿಲ್ಲ. ಹೀಗಾಗಿ ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...