ಪ್ರಸ್ತುತ ಐಪಿಎಲ್ ಟೂರ್ನಿಯ ಮೊದಲ ಕೆಲ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುತ ಪ್ರದರ್ಶನವನ್ನು ತೋರಿಸಿತ್ತು. ಸತತ 4 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ವಾಗಿದೆ ಎಂದು ಎಲ್ಲರೂ ಖುಷಿ ಪಟ್ಟಿದ್ದರು. ಆದರೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಮುಗ್ಗರಿಸಿದೆ. ಬಲಿಷ್ಠವಲ್ಲದ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಸೋಲುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಎರಡನೆ ಸೋಲನ್ನು ಕಂಡಿದೆ.
ಈತ ಸನ್ ರೈಸರ್ಸ್ ಹೈದರಾಬಾದ್ ತಂಡ ಕೂಡ ಸತತ ಸೋಲುಗಳಿಂದ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದು ಡೇವಿಡ್ ವಾರ್ನರ್ ನಾಯಕತ್ವವನ್ನು ತ್ಯಜಿಸಿದ್ದಾರೆ. ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಾಯಕತ್ವವನ್ನು ಸತತ ಸೋಲುಗಳ ಕಾರಣದಿಂದ ತ್ಯಜಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಅವರು ಸಹ ತ್ಯಜಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ಮಂದಿ ಬೇಡಿಕೆ ಇಟ್ಟಿದ್ದಾರೆ. ಕೊಹ್ಲಿ ಅವರು ಆರ್ ಸಿಬಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದಂತೆ ಫೋಟೋವೊಂದನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ ಆ ಫೋಟೋ ಮುಂದೆ ಇದೆ ನೋಡಿ
ಕೆಲ ಪಂದ್ಯಗಳಲ್ಲಿ ಕಳಪೆ ನಾಯಕತ್ವ ಮಾಡಿದ ವಾರ್ನರ್ ನಾಯಕತ್ವವನ್ನು ತ್ಯಜಿಸಿದರು ಆದರೆ ವರ್ಷಗಳಿಂದ ಕಳಪೆ ನಾಯಕತ್ವವನ್ನು ಮಾಡುತ್ತಿರುವ ವಿರಾಟ್ ಕೊಹ್ಲಿ ಮಾತ್ರ ಇನ್ನೂ ಬೆಂಗಳೂರು ತಂಡದ ನಾಯಕನಾಗಿಯೇ ಮುಂದುವರಿಯುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರು ಸಹ ವಾರ್ನರ್ ರಂತೆ ಬೆಂಗಳೂರು ತಂಡದ ನಾಯಕತ್ವವನ್ನು ತ್ಯಜಿಸಬೇಕು ಹಾಗಾದರೆ ಮಾತ್ರ ಬೆಂಗಳೂರು ತಂಡ ಕಪ್ ಗೆಲ್ಲಲು ಸಾಧ್ಯ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಗಳು ಹರಿದಾಡುತ್ತಿವೆ.