No menu items!
12.4 C
Munich
Wednesday, April 29, 2026

ಆಳವಾದ ಕಂದಕಕ್ಕೆ ಬಿದ್ದ ಬಸ್: 38 ಜನರು ಸಾವು

Must read

ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ. ದೋಡಾ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.
ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಸ್ಕಿಡ್ ಆಗಿ 300 ಅಡಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ದೋಡಾದ ಅಸ್ಸಾರ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್ಗೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article