ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಆಗಸ್ಟ್ 18ರಂದು ಬೀದರ್‌ನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಆಗಸ್ಟ್ 18ರ ಬುಧವಾರ ಬೆಳಗ್ಗೆ 10 ಗಂಟೆಗೆ ಗುಂಪಾ ರಸ್ತೆಯ ಕುಂಬಾರವಾಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9483977971, 8073241315 ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಬೀದರ್ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಸಕ್ತರು ಆಗಸ್ಟ್ 20ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಬೆಳಗ್ಗೆ 11ಗಂಟೆಗೆ ಬೀದರ್ ಅಂಚೆ ಅಧೀಕ್ಷಕರ ಕಾರ್ಯಾಲಯಕ್ಕೆ ಆಗಮಿಸಬೇಕು.
ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 50 ವರ್ಷಗಳು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೇಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.