ಆಸ್ಟ್ರೇಲಿಯಾ ಕ್ರಿಕೆಟ್‌ಗೆ ನೂತನ ನಾಯಕ

Date:

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಹೀನಾಯವಾಗಿ ಸೋಲು ಕಂಡಿದೆ. 1-4 ಅಂತರದಿಂದ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ತಂಡಕ್ಕೆ ಶರಣಾಗಿ ಸರಣಿಯನ್ನು ವೆಸ್ಟ್ ಇಂಡೀಸ್‌ಗೆ ಒಪ್ಪಿಸಿದೆ. ಈಗ ಏಕದಿನ ಪಂದ್ಯಗಳ ಸರಣಿಗೆ ಈ ಎರಡು ತಂಡಗಳು ಸಜ್ಜಾಗಿರುವಂತೆಯೇ ಆಸ್ಟ್ರೇಲಿಯಾ ಮತ್ತೊಂದು ಆಘಾತಕ್ಕೆ ಒಳಗಾಗಿದೆ.

ಆಸ್ಟ್ರೇಲಿಯಾ ತಂಡದ ಸೀಮಿತ ಓವರ್‌ಗಳ ನಾಯಕ ಆರೋನ್ ಫಿಂಚ್ ಟಿ20 ಸರಣಿಯ ಐದನೇ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಏಕದಿನ ಸರಣಿಯ ಮೊದಲ ಪಂದ್ಯದಿಂದ ಅವರು ಅನಿವಾರ್ಯವಾಗಿ ಹೊರಗುಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಲೆಕ್ಸ್ ಕ್ಯಾರಿ ಅವರನ್ನು ಆಸ್ಟ್ರೇಲಿಯಾ ತಂಡದ ನಾಯಕನನ್ನಾಗಿ ಹೆಸರಿಸಲಾಗಿದೆ. ಆಸ್ಟ್ರೇಲಿಯಾ ತಂಡದ ಖಾಯಂ ಉಪನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ಈ ಸರಣಿಯಿಂದ ಹೊರಗುಳಿದಿರುವ ಕಾರಣ ಅಲಕ್ಸ್ ಕ್ಯಾರಿ ಹೆಗಲಿಗೆ ನಾಯಕತ್ವದ ಜವಾಬ್ಧಾರಿ ಬಿದ್ದಿದೆ. ಈ ಮೂಲಕ ಅಲೆಕ್ಸ್ ಕ್ಯಾರೀ ಆಸ್ಟ್ರೇಲಿಯಾ ಏಕದಿನ ತಂಡದ 26ನೇ ನಾಯಕ ಎನಿಸಿದ್ದಾರೆ.
ಇನ್ನು ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಮಡದ ಕೆಲ ಅನುಭವಿ ಆಟಗಾರರು ಹೊರಗುಳಿದಿದ್ದಾರೆ. ಏಕದಿನ ಮಾದರಿಯಲ್ಲಿ ಈ ಮುನ್ನ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿರುವ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್‌ ಕೂಡ ವೈಯಕ್ತಿಕ ಕಾರಣಗಳಿಗಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಇದಕ್ಕೂ ಮುನ್ನ ಅಲೆಕ್ಸ್ ಕ್ಯಾರಿ ಅವರನ್ನು ಸೀಮಿತ ಓವರ್‌ಗಳ ತಂಡದ ಸಹ ಉಪನಾಯಕನನ್ನಾಗಿ ಹೆಸರಿಸಲಾಗಿತ್ತು. ಆದರೆ ಬಳಿಕ ಆಸ್ಟ್ರೇಲಿಯಾ ಒಬ್ಬನೇ ಉಪನಾಯಕನನ್ನು ಉಳಿಸಿಕೊಳ್ಳಲು ಉದ್ದೇಶಿಸಿದ ಕಾರಣದಿಂದಾಗಿ ಸಹ ಉಪನಾಯಕನ ಸ್ಥಾನದಿಂದ ಅಲೆಕ್ಸ್ ಕ್ಯಾರಿ ಕೆಳಗಿಳಿದಿದ್ದರು.

ಇನ್ನು ಅಲೆಕ್ಸ್ ಕ್ಯಾರಿ ಈ ಮುನ್ನ ಆಸ್ಟ್ರೇಲಿಯಾ ಎ ತಂಡದ ನಾಯಕತ್ವ ವಹಿಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಅಡಿಲೇಡ್ ಸ್ಟ್ರೈಕರ್ಸ್, ಸೌಥ್ ಆಸ್ಟ್ರೇಲಿಯಾ ತಂಡವನ್ನು ಕೂಡ ಮುನ್ನಡೆಸಿದ್ದಾರೆ. ಈಗ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲು ದೊರೆಯ ಅವಕಾಶಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಕೆರಿಬಿಯನ್ ರಾಷ್ಟ್ರಕ್ಕೆ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಮೊದಲಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗವಹಿಸಿತ್ತು. ಈಗ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲು ಸಜ್ಜಾಗಿದೆ. ಬುಧವಾರ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...