ದೇಶದ ಪ್ರಧಾನಿಯೊಬ್ಬರು ಕ್ರಿಕೆಟ್ ಕ್ರೀಡಾಂಗಣದಲ್ಲಿ ವಾಟರ್ ಬಾಯ್ ಆಗಿ ಕೆಲಸ ನಿರ್ವಹಿಸಿದ್ದನ್ನು ಇದುವರೆಗೂ ಸಹ ನೀವು ಎಲ್ಲಿಯೂ ನೋಡಿರಲಿಕ್ಕಿಲ್ಲ. ಹೌದು ಇಂತಹ ಒಂದು ಕೆಲಸವನ್ನು ಆಸ್ಟ್ರೇಲಿಯಾ ದೇಶದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಕ್ಯಾನ್ ಬೆರಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆಸ್ಟ್ರೇಲಿಯಾ ಪ್ರೆಸಿಡೆಂಟ್ ಇಲೆವೆನ್ ಮತ್ತು ಶ್ರೀಲಂಕಾ ತಂಡದ ನಡುವಿನ ಅಭ್ಯಾಸ ಪಂದ್ಯದಲ್ಲಿ ಮಾಡಿದ್ದಾರೆ.
ಹೌದು ಆಸ್ಟ್ರೇಲಿಯಾ ಪ್ರೆಸಿಡೆಂಟ್ ಇಲ್ಲವೆನ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಟಿ ಟ್ವೆಂಟಿ ಪಂದ್ಯ ನಡೆಯುತ್ತಿತ್ತು. ಈ ವೇಳೆ ಆಸ್ಟ್ರೇಲಿಯಾ ಪ್ರೆಸಿಡೆಂಟ್ ಇಲೆವೆನ್ ತಂಡದ 12 ನೇ ಆಟಗಾರನಾಗಿ ಆಸ್ಟ್ರೇಲಿಯಾ ದೇಶದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಇದ್ದರು. ಅಷ್ಟೇ ಅಲ್ಲದೆ ಪಂದ್ಯದ ಬ್ರೇಕ್ ಸಮಯದಲ್ಲಿ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಇತರ ಆಟಗಾರರಿಗೆ ನೀರು ಸರಬರಾಜು ಮಾಡುವ ಕೆಲಸ ಮಾಡಿದ್ದಾರೆ. ಇನ್ನು ಅವರ ಈ ಕೆಲಸ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು ಫೋಟೋಗಳು ಎಲ್ಲೆಡೆ ಹರಿದಾಡುತ್ತಿವೆ.